Advertise

18 November 2023

19.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಮಾನ್ಯ ಗುಡುಗು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. (ನಿನ್ನೆ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ ಗುಡುಗು ಸಹಿತ ಮಳೆಯಾಗಿದೆ) 

ಕೊಡಗು, ಸೋಮವಾರಪೇಟೆ, ಕುದುರೆಮುಖ, ಶಿೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಮಂಡ್ಯ, ಚಾಮರಾಜನಗರ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಕ್ಷೀಣಿಸಿರುವುದರಿಂದ ನವೆಂಬರ್ 19ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 



No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...