Advertise

19 November 2023

20.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಭಾಗಗಳಲ್ಲಿ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ನವೆಂಬರ್ 21ರಿಂದ ದಕ್ಷಿಣ ಒಳನಾಡು ಹಾಗೂ ನವೆಂಬರ್ 22ರಿಂದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಿಂಗಾರು ಚುರುಕಾಗುವ ಲಕ್ಷಣಗಳಿವೆ. 

No comments:

Post a Comment

25.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...