21.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ನವೆಂಬರ್ 21ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ನವೆಂಬರ್ 22ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ನವೆಂಬರ್ 26ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.
No comments:
Post a Comment