22.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ ಸಂಜೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಮೈಸೂರು ಒಂದೆರಡು ಕಡೆ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ನವೆಂಬರ್ 23 ಹಾಗೂ 24 ರಂದು ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನವೆಂಬರ್ 29 ಅಥವಾ 30ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ನವೆಂಬರ್ 25 ಹಾಗೂ 26ರಂದು ಮಹಾರಾಷ್ಟ್ರ ದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
No comments:
Post a Comment