23.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಹಿಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ನವೆಂಬರ್ 23 ಹಾಗೂ 24ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ನವೆಂಬರ್ 30ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment