Advertise

23 November 2023

24.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡದ ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಹಿಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ಈಗಿನ ಮಳೆಯ ವಾತಾವರಣವು ಸೃಷ್ಟಿಯಾಗಿದ್ದು, ನವೆಂಬರ್  24ರಂದು  ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ನವೆಂಬರ್ 25ರಿಂದ ಮಳೆಯ ಕಡಿಮೆಯಾಗಿ ಮಲೆನಾಡು ಹಾಗೂ ಕರಾವಳಿಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...