25.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ತುಂತುರು ಇರಬಹುದು.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ.
ಒಟ್ಟಿನಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ, ಮಳೆಯ ವಾತಾವರಣ ಇದೆ.
ನವೆಂಬರ್ 25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ನವೆಂಬರ್ 30ರ ತನಕವೂ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment