25 November 2023

26.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ,  ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಸಾಧ್ಯತೆ ಇದೆ. 

ನವೆಂಬರ್ 28ರಂದು ಬಂಗಾಳಕೊಲ್ಲಿಯ ಅಂಡಮಾನ್ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ



No comments:

Post a Comment