26 November 2023

27.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು,ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಬೀದರ್ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಮುಂಗಾರಿನಂತೆ ಹಿಂಗಾರು ದುರ್ಬಲತೆ ಮುಂದುವರಿಯಲಿದೆ.
ನವೆಂಬರ್ 28ರ ಅಂದಾಜು ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 

No comments:

Post a Comment