28.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ ( ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಸಾಧ್ಯತೆ ಹೆಚ್ಚಿದೆ.)
ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಶಿೃಂಗೇರಿ ,ಕೊಪ್ಪ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಾದಾಮಿ, ರಾಮದುರ್ಗ, ಬಾಗಲಕೋಟೆ ಸುತ್ತಮುತ್ತ, ಬಳ್ಳಾರಿಯ ಸಂಡೂರು ಸುತ್ತಮುತ್ತ, ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ನವೆಂಬರ್ 29 ಅಥವಾ 30ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.
ಅಲ್ಲಿಯ ತನಕ ಅಂದರೆ ನವೆಂಬರ್ 30ರ ತನಕ ರಾಜ್ಯದ ಅಲ್ಲಲ್ಲಿ ಮೋಡ ಹಾಗೂ ಮಳೆಯ ಮುನ್ಸೂಚನೆ ಇದೆ.
No comments:
Post a Comment