Advertise

28 November 2023

29.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಶಿೃಂಗೇರಿ, ಆಗುಂಬೆ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ತುಮಕೂರು, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ ಹಾಗೂ ಬೀದರ್ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ಮತ್ತೂ ಒಂದು ದಿನ ತಡವಾಗಲಿದ್ದು, ನವೆಂಬರ್ 30 ಕ್ಕೆ ರೂಪುಗೊಳ್ಳವ ಲಕ್ಷಣಗಳಿವೆ. 
ವಾಯುಭಾರ ಕುಸಿತವು ಬಲಗೊಳ್ಳುತ್ತಿದ್ದಂತೆಯೇ ಹಿಂಗಾರು ಹಿಂದೆ ಸರಿದು, ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆ ಇದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...