30.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. (ಸುಳ್ಯ ತಾಲೂಕಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ನಿನ್ನೆ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯಾದಂತೆ ಇವತ್ತು ಸಹ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ.
ಡಿಸೆಂಬರ್ 1 ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಇದ್ದು, ಮುಂದಿನ 2 ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಡಿಸೆಂಬರ್ 4 ಅಥವಾ 5 ರಂದು ಆಂದ್ರಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಡಿಸೆಂಬರ್ 2ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆ ಇದೆ.
No comments:
Post a Comment