Advertise

31 December 2023

01.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ಜನವರಿ 1ರಂದು 
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಜನವರಿ 3 ಅಥವಾ 4ರಂದು ಮಹಾರಾಷ್ಟ್ರ ಕರಾವಳಿ ಸಮೀಪ ತಲಪುವ ನಿರೀಕ್ಷೆಯಿದೆ. 
ಜನವರಿ 3ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


30 December 2023

31.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಮತ್ತು ಕರಾವಳಿ ತೀರ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ಜನವರಿ 1 ಅಥವಾ 2ರಂದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಜನವರಿ 7ರ ಅಂದಾಜು ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲುಪುವ ಸಾಧ್ಯತೆ ಇದೆ. 

ಜನವರಿ 3ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ವಾಯುಭಾರ ಕುಸಿತದ ಪ್ರಭಾವ ಆರಂಭವಾಗಿ 5ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಲಕ್ಷಣಗಳಿವೆ. ವಾಯುಭಾರ ಕುಸಿತದ ಪಥ ಬದಲಾದಂತೆ ಪರಿಣಾಮವೂ ಬದಲಾಗಬಹುದು. 

29 December 2023

30.12. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಛಳಿ ಕಡಿಮೆಯಾಗಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 1 ಅಥವಾ 2ರಂದು ಅರಬ್ಬಿ ಸಮುದ್ರದ ಭೂಮಧ್ಯ ರೇಖೆಯ ಬಳಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ (ವೃತ್ತ ಮಾಡಿದ ಭಾಗದಲ್ಲಿ). ಜನವರಿ 6ರ ವೇಳೆಗೆ ಉತ್ತರ ಕರ್ನಾಟಕ, ಮಹಾರಾಷ್ಟ್ರ ಕರಾವಳಿಗೆ ತಲಪುವ ಸಾಧ್ಯತೆ ಇದೆ. (ಇದು ಈಗಿನ ಸ್ಥಿತಿಯಲ್ಲಿ ಸಾಧ್ಯತೆ ಮಾತ್ರ. ಬದಲಾಗಬಹುದು). ಜನವರಿ 4ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 

25 December 2023

.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಆದರೂ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಅಲ್ಪ ಪ್ರಮಾಣದ ಮೋಡ ಇರುವ ಸಾಧ್ಯತೆ ಇದೆ. 

ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಡಿಸೆಂಬರ್ 26ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದ್ದರೂ, ತಮಿಳುನಾಡಿನಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿರುವುದರಿಂದ ಡಿಸೆಂಬರ್ 28 ಅಥವಾ 29ರಿಂದ ರಾಜ್ಯದಲ್ಲೂ  ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆಯೂ ಇದೆ. 

22 December 2023

23.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಅರಬ್ಬಿ ಸಮುದ್ರದಲ್ಲಿ ಗಾಳಿಯ ಸಂಚಾರವು ಅನಿಯಮಿತವಾಗಿರುವುದರಿಂದ ರಾಜ್ಯದಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇನ್ನೂ ಎರಡು ಮೂರು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 


21 December 2023

22.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಒಂದೆರಡು ಕಡೆ ಹಗುರವಾಗಿ ಮೋಡದ ವಾತಾವರಣದ ಸಾಧ್ಯತೆಯೂ ಇದೆ. 

ಅರಬ್ಬಿ ಸಮುದ್ರದಲ್ಲಿ ಗಾಳಿಯ ಅನಿಶ್ಚಿತ, ಅನಿಯಮಿತ ದಿಕ್ಕಿನ ಚಲನೆಯಿಂದಾಗಿ ಈಗಿನ ಮೋಡದ ವಾತಾವರಣವು ಇನ್ನೂ ಒಂದೆರಡು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. 




20 December 2023

21.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದ್ದು ಕರಾವಳಿಯಲ್ಲಿ ಒಣ ಹವೆ ಮುಂದುವರಿಯಲಿದೆ. 

ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಣ ಹವೆ ಮುಂದುವರಿಯಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು, ಒಣ ಹವೆ ಮುಂದುವರಿಯಲಿದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ. ಕ್ರಮೇಣ ಛಳಿಯೂ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ. 



19 December 2023

20.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಇರುವುದಿಲ್ಲ. ಒಣ ಹವೆ ಆವರಿಸುವ ಮುನ್ಸೂಚನೆ ಇದೆ.

ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಇದ್ದರೂ ಮಳೆಯ ಸಾಧ್ಯತೆ ಕಾಣುತ್ತಿಲ್ಲ. ಒಣ ಹವೆ ಮುಂದುವರಿಯಲಿದೆ. 

ಉತ್ತರ ಭಾರತ ಕಡೆಯಿಂದ ಛಳಿ ಗಾಳಿ ಬೀಸಲು ಆರಂಭವಾಗುವ ಲಕ್ಷಣಗಳಿವೆ. 

18 December 2023

19.12. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 
ಕಾಸರಗೋಡು ಅಲ್ಲಲ್ಲಿ ಹಾಗೂ ದಕ್ಷಿಣ ಕನ್ನಡದ ಸುಳ್ಯ, ಪುತ್ತೂರು, ಬೆಳ್ತಂಗಡಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು ಹಾಗೂ ಚಾಮರಾಜನಗರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯಿಂದ ದಾಟಿ ಅರಬ್ಬಿ ಸಮುದ್ರದ ಕಡೆಗೆ ಸಾಗಿದ ವಾಯುಭಾರ ಕುಸಿತದಂತಹ ತಿರುವಿಕೆಯು ಶಿಥಿಲಗೊಳ್ಳುತ್ತಿರುವುದರಿಂದ  ಈಗಿನ ಮೋಡದ ವಾತಾವರಣವು ಇನ್ನೆರಡು ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ. 

17 December 2023

18.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಶ್ರೀಲಂಕಾ ಪಶ್ಚಿಮ ಕರಾವಳಿ ದಾಟಿ ಅರಬ್ಬಿ ಸಮುದ್ರದಲ್ಲಿ ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. ಈಗಿನ ಮೋಡದ ವಾತಾವರಣದ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. 

16 December 2023

17.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಪಥ ಬದಲಿಸುವ ಲಕ್ಷಣಗಳಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ. ಇದರಿಂದ ಡಿಸೆಂಬರ್ 17ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.) 




15 December 2023

16.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಅದು ನಾಳೆ ಶ್ರೀಲಂಕಾ ಮೂಲಕ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 16ರಂದು ದಕ್ಷಿಣ ತಮಿಳುನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಡಿಸೆಂಬರ್ 17ರಂದು ತಮಿಳುನಾಡಿನಾದ್ಯಂತ ಹಾಗೂ ರಾಜ್ಯದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ತುಮಕೂರು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಡಿಸೆಂಬರ್ 16ರಂದು ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

14 December 2023

15.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.12. 2023ಲ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ಒಣ ಹವೆ ಆವರಿಸಲಿದೆ. 

ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತವು ಒಮಾನ್ ಕರಾವಳಿಗೆ ತಲುಪಲಿದ್ದು, ಅದರಿಂದ ಇನ್ನು ಯಾವುದೇ ಪರಿಣಾಮವಿಲ್ಲ. 

ಡಿಸೆಂಬರ್ 15ರಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಡಿಸೆಂಬರ್ 16ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ಡಿಸೆಂಬರ್ 20ರ ತನಕ ಮುಂದುವರಿಯುವ ಸಾಧ್ಯತೆ ಇದೆ. 

13 December 2023

14.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು - ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಉಳಿದ ಕರಾವಳಿ ಭಾಗಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಮೋಡದ ವಾತಾವರ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮತ್ತಷ್ಟು ಪಶ್ಚಿಮಕ್ಕೆ ಚಲಿಸುತ್ತಿರುವುದರಿಂದ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಿ ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆ ಪರಿಣಾಮದಿಂದ ಮೋಡಗಳು ಪಶ್ಚಿಮದಿಂದ ಪೂರ್ವಕ್ಕೆ ಚಲಿಸಲು ಆರಂಭಿಸಿವೆ. (ಇದರಿಂದ, ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಮುಂಗಾರು ರೀತಿಯ ಮಳೆಯಾಗಿದೆ). 

ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 15ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, 16ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. 


11 December 2023

12.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ(ದಕ್ಷಿಣ ಭಾಗ) ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯ ಜೊತೆಗೆ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರಿಂದ ಮಳೆಯಾಗುತ್ತಿದ್ದು, ಡಿಸೆಂಬರ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 
ಇದೇ ವೇಳೆಯಲ್ಲಿ ಬಂಗಾಳಕೊಲ್ಲಿಯ ಶ್ರೀಲಂಕಾದ ಆಗ್ನೇಯ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮಳೆ ಕಡಿಮೆಯಾಗಲು ಸಹಕಾರಿಯಾಗಿದೆ. ಈ ತಿರುಗುವಿಕೆಯು ಬಲಗೊಳ್ಳುವ ಲಕ್ಷಣಗಳಿವೆ. 

10 December 2023

11.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಸೋಮವಾರಪೇಟೆ, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. 

ಮೈಸೂರು ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ, ಡಿಸೆಂಬರ್ 15ರಿಂದ ಮತ್ತೆ ಮೂರು ದಿನಗಳ ಕಾಲ ಮಳೆಯ ಸಾಧ್ಯತೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


09 December 2023

10.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.12. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕಾಸರಗೋಡು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ  ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು ಅಲ್ಲಲ್ಲಿ ಸಾಮಾನ್ಯ, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಡಿಸೆಂಬರ್ 10ರಿಂದ ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

08 December 2023

09.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದ ಸಿದ್ಧಾಪುರ, ಶಿರಸಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂಥಹ ತಿರುಗುವಿಕೆಯ ಪರಿಣಾಮದಿಂದ ಈಗಿನ ಮಳೆಯ ವಾತಾವರಣವು ಡಿಸೆಂಬರ್ 9ರ ವರೆಗೆ ದಕ್ಷಿಣ ಒಳನಾಡು ಹಾಗೂ ಡಿಸೆಂಬರ್ 12ರ ತನಕ ಮಲೆನಾಡು ಹಾಗೂ ಕರಾವಳಿ  ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆ ಇದೆ. 

07 December 2023

08.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಒಣ ಹವೆ ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಡಿಸೆಂಬರ್ 8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಾಗೂ ಡಿಸೆಂಬರ್ 9 ರಿಂದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.


06 December 2023

07.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಆವರಿಸಲಿದೆ. 

ಕೊಡಗು ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಬಿಸಿಲು ಹಾಗೂ ಒಣ ಹವೆ ಇರಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಗದಗದ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು, ಇದರಿಂದ ತಕ್ಷಣ ಪರಿಣಾಮ ಇಲ್ಲದಿದ್ದರೂ ಡಿಸೆಂಬರ್ 8 ಹಾಗೂ 9ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಹಿಂಗಾರು(ಗುಡುಗು ಸಹಿತ) ಮಳೆಯ ಮುನ್ಸೂಚನೆ ಇದೆ. 

05 December 2023

06.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಆಂದ್ರಾ ಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಚಂಡಮಾರುತವು ಈಗಾಗಲೇ ಭೂಪ್ರವೇಶಿಸಿದ್ದು, ಇನ್ನೂ 2 ದಿನಗಳ ಕಾಲ ತನ್ನ ಪ್ರಭಾವ ಬೀರುವ ಸಾಧ್ಯತೆ ಇದೆ. 
ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 9 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...