Advertise

31 December 2023

01.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ಜನವರಿ 1ರಂದು 
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಜನವರಿ 3 ಅಥವಾ 4ರಂದು ಮಹಾರಾಷ್ಟ್ರ ಕರಾವಳಿ ಸಮೀಪ ತಲಪುವ ನಿರೀಕ್ಷೆಯಿದೆ. 
ಜನವರಿ 3ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...