04.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ, ಕುದುರೆಮುಖ, ಶಿೃಂಗೇರಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು, ಶಿವಮೊಗ್ಗ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಾಮರಾಜನಗರದ ಮಲೈಮಾದೇಶ್ವರ ಬೆಟ್ಟದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ಚಂಡಮಾರುತವು ಡಿಸೆಂಬರ್ 4ರ ರಾತ್ರಿ ಅಥವಾ 5ರಂದು ಆಂದ್ರಾದ ನೆಲ್ಲೂರು ಹಾಗೂ ಓಂಗಲ್ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ.
ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
No comments:
Post a Comment