05.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಚಂಡಮಾರುತವು ಇವತ್ತು ಆಂದ್ರಾದ ನೆಲ್ಲೂರು ಕರಾವಳಿಯ ಮೂಲಕ ಪ್ರವೇಶಿಸುವ ಸಾಧ್ಯತೆ ಇದೆ.
ರಾಜ್ಯದಾದ್ಯಂತ ಇನ್ನೂ ಎರಡು ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಚಂಡಮಾರುತ ಸಂಪೂರ್ಣ ಶಿಥಿಲಗೊಂಡ ನಂತರ ಅಂದರೆ ಡಿಸೆಂಬರ್ 7 ಅಥವಾ 8ರ ನಂತರ ಮಳೆಯ ಪರಿಸ್ಥಿತಿ ನೋಡಬೇಕಾಗಿದೆ.
No comments:
Post a Comment