07.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಆವರಿಸಲಿದೆ.
ಕೊಡಗು ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಬಿಸಿಲು ಹಾಗೂ ಒಣ ಹವೆ ಇರಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಗದಗದ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು, ಇದರಿಂದ ತಕ್ಷಣ ಪರಿಣಾಮ ಇಲ್ಲದಿದ್ದರೂ ಡಿಸೆಂಬರ್ 8 ಹಾಗೂ 9ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಹಿಂಗಾರು(ಗುಡುಗು ಸಹಿತ) ಮಳೆಯ ಮುನ್ಸೂಚನೆ ಇದೆ.
No comments:
Post a Comment