Advertise

07 December 2023

08.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಒಣ ಹವೆ ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಡಿಸೆಂಬರ್ 8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಾಗೂ ಡಿಸೆಂಬರ್ 9 ರಿಂದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.


No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...