Advertise

08 December 2023

09.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದ ಸಿದ್ಧಾಪುರ, ಶಿರಸಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂಥಹ ತಿರುಗುವಿಕೆಯ ಪರಿಣಾಮದಿಂದ ಈಗಿನ ಮಳೆಯ ವಾತಾವರಣವು ಡಿಸೆಂಬರ್ 9ರ ವರೆಗೆ ದಕ್ಷಿಣ ಒಳನಾಡು ಹಾಗೂ ಡಿಸೆಂಬರ್ 12ರ ತನಕ ಮಲೆನಾಡು ಹಾಗೂ ಕರಾವಳಿ  ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆ ಇದೆ. 

No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...