ಕಾಸರಗೋಡು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು ಅಲ್ಲಲ್ಲಿ ಸಾಮಾನ್ಯ, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಡಿಸೆಂಬರ್ 10ರಿಂದ ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment