11.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಕೊಡಗು, ಸೋಮವಾರಪೇಟೆ, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.
ಮೈಸೂರು ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ, ಡಿಸೆಂಬರ್ 15ರಿಂದ ಮತ್ತೆ ಮೂರು ದಿನಗಳ ಕಾಲ ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
No comments:
Post a Comment