Advertise

11 December 2023

12.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ(ದಕ್ಷಿಣ ಭಾಗ) ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯ ಜೊತೆಗೆ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರಿಂದ ಮಳೆಯಾಗುತ್ತಿದ್ದು, ಡಿಸೆಂಬರ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 
ಇದೇ ವೇಳೆಯಲ್ಲಿ ಬಂಗಾಳಕೊಲ್ಲಿಯ ಶ್ರೀಲಂಕಾದ ಆಗ್ನೇಯ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮಳೆ ಕಡಿಮೆಯಾಗಲು ಸಹಕಾರಿಯಾಗಿದೆ. ಈ ತಿರುಗುವಿಕೆಯು ಬಲಗೊಳ್ಳುವ ಲಕ್ಷಣಗಳಿವೆ. 

No comments:

Post a Comment

25.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...