26.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಆದರೂ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಅಲ್ಪ ಪ್ರಮಾಣದ ಮೋಡ ಇರುವ ಸಾಧ್ಯತೆ ಇದೆ.
ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಡಿಸೆಂಬರ್ 26ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದ್ದರೂ, ತಮಿಳುನಾಡಿನಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿರುವುದರಿಂದ ಡಿಸೆಂಬರ್ 28 ಅಥವಾ 29ರಿಂದ ರಾಜ್ಯದಲ್ಲೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆಯೂ ಇದೆ.
No comments:
Post a Comment