14.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು - ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರಾವಳಿ ಭಾಗಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಮೋಡದ ವಾತಾವರ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮತ್ತಷ್ಟು ಪಶ್ಚಿಮಕ್ಕೆ ಚಲಿಸುತ್ತಿರುವುದರಿಂದ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಿ ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆ ಪರಿಣಾಮದಿಂದ ಮೋಡಗಳು ಪಶ್ಚಿಮದಿಂದ ಪೂರ್ವಕ್ಕೆ ಚಲಿಸಲು ಆರಂಭಿಸಿವೆ. (ಇದರಿಂದ, ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಮುಂಗಾರು ರೀತಿಯ ಮಳೆಯಾಗಿದೆ).
ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 15ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, 16ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
No comments:
Post a Comment