ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ಒಣ ಹವೆ ಆವರಿಸಲಿದೆ.
ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತವು ಒಮಾನ್ ಕರಾವಳಿಗೆ ತಲುಪಲಿದ್ದು, ಅದರಿಂದ ಇನ್ನು ಯಾವುದೇ ಪರಿಣಾಮವಿಲ್ಲ.
ಡಿಸೆಂಬರ್ 15ರಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಡಿಸೆಂಬರ್ 16ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ಡಿಸೆಂಬರ್ 20ರ ತನಕ ಮುಂದುವರಿಯುವ ಸಾಧ್ಯತೆ ಇದೆ.
No comments:
Post a Comment