Advertise

16 December 2023

17.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಪಥ ಬದಲಿಸುವ ಲಕ್ಷಣಗಳಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ. ಇದರಿಂದ ಡಿಸೆಂಬರ್ 17ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.) 




No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...