18.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಶ್ರೀಲಂಕಾ ಪಶ್ಚಿಮ ಕರಾವಳಿ ದಾಟಿ ಅರಬ್ಬಿ ಸಮುದ್ರದಲ್ಲಿ ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. ಈಗಿನ ಮೋಡದ ವಾತಾವರಣದ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment