ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಕಾಸರಗೋಡು ಅಲ್ಲಲ್ಲಿ ಹಾಗೂ ದಕ್ಷಿಣ ಕನ್ನಡದ ಸುಳ್ಯ, ಪುತ್ತೂರು, ಬೆಳ್ತಂಗಡಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು ಹಾಗೂ ಚಾಮರಾಜನಗರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯಿಂದ ದಾಟಿ ಅರಬ್ಬಿ ಸಮುದ್ರದ ಕಡೆಗೆ ಸಾಗಿದ ವಾಯುಭಾರ ಕುಸಿತದಂತಹ ತಿರುವಿಕೆಯು ಶಿಥಿಲಗೊಳ್ಳುತ್ತಿರುವುದರಿಂದ ಈಗಿನ ಮೋಡದ ವಾತಾವರಣವು ಇನ್ನೆರಡು ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ.
No comments:
Post a Comment