23.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಅರಬ್ಬಿ ಸಮುದ್ರದಲ್ಲಿ ಗಾಳಿಯ ಸಂಚಾರವು ಅನಿಯಮಿತವಾಗಿರುವುದರಿಂದ ರಾಜ್ಯದಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇನ್ನೂ ಎರಡು ಮೂರು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
No comments:
Post a Comment