Advertise

29 December 2023

30.12. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಛಳಿ ಕಡಿಮೆಯಾಗಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 1 ಅಥವಾ 2ರಂದು ಅರಬ್ಬಿ ಸಮುದ್ರದ ಭೂಮಧ್ಯ ರೇಖೆಯ ಬಳಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ (ವೃತ್ತ ಮಾಡಿದ ಭಾಗದಲ್ಲಿ). ಜನವರಿ 6ರ ವೇಳೆಗೆ ಉತ್ತರ ಕರ್ನಾಟಕ, ಮಹಾರಾಷ್ಟ್ರ ಕರಾವಳಿಗೆ ತಲಪುವ ಸಾಧ್ಯತೆ ಇದೆ. (ಇದು ಈಗಿನ ಸ್ಥಿತಿಯಲ್ಲಿ ಸಾಧ್ಯತೆ ಮಾತ್ರ. ಬದಲಾಗಬಹುದು). ಜನವರಿ 4ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...