Advertise

30 December 2023

31.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಮತ್ತು ಕರಾವಳಿ ತೀರ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ಜನವರಿ 1 ಅಥವಾ 2ರಂದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಜನವರಿ 7ರ ಅಂದಾಜು ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲುಪುವ ಸಾಧ್ಯತೆ ಇದೆ. 

ಜನವರಿ 3ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ವಾಯುಭಾರ ಕುಸಿತದ ಪ್ರಭಾವ ಆರಂಭವಾಗಿ 5ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಲಕ್ಷಣಗಳಿವೆ. ವಾಯುಭಾರ ಕುಸಿತದ ಪಥ ಬದಲಾದಂತೆ ಪರಿಣಾಮವೂ ಬದಲಾಗಬಹುದು. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...