Advertise

25 January 2024

26.01.2024 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಲಿದ್ದು ತಡ ರಾತ್ರಿ ಅಥವಾ ಮುಂಜಾನೆ ಒಂದೆರಡು ಕಡೆ ಸಣ್ಣ ತುಂತುರು ಮಳೆಯ ಸಾಧ್ಯತೆಯೂ ಇದೆ. ನಾಳೆಯಿಂದ ಸ್ವಚ್ಛ ಆಕಾಶದ ಲಕ್ಷಣಗಳಿವೆ. 

ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ತಡ ರಾತ್ರಿ ಅಥವಾ ಮುಂಜಾನೆ ಒಂದೆರಡು ಕಡೆ ಸಣ್ಣ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

26 ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

20 January 2024

21.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ಸಣ್ಣ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಛಳಿಯ ವಾತಾವರಣಕ್ಕೆ ಸ್ವಲ್ಪ ಮಟ್ಟಿಗೆ ತೊಡಕಾಗಿದೆ. 


19 January 2024

20.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಗುರ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಅರಬ್ಬಿ ಸಮುದ್ರದಲ್ಲಿ ಗಾಳಿಯ ಚಲನೆಯು ಒಂದು ಹಂತಕ್ಕೆ ಸಮರ್ಪಕವಾಗುತ್ತಲಿದ್ದು, ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 
ಆದರೂ ಜನವರಿ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಗುರ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 



18 January 2024

19.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ರಾತ್ರಿ ಅಥವಾ ಮುಂಜಾನೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಈ ವಾತಾವರಣವು ಜನವರಿ 24ರ ತನಕವೂ ಮುಂದುವರಿಯುವ ಲಕ್ಷಣಗಳಿವೆ. 
ಇದರಿಂದ ಛಳಿ ಕಡಿಮೆಯಾಗುವ ಸಾಧ್ಯತೆ ಹೆಚ್ಚಿದೆ. 


17 January 2024

18.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಒಂದೆರಡು ತುಂತುರು ಮಳೆಯ ಸಾಧ್ಯತೆಯೂ ಇದೆ (ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಇರಬಹುದು). ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ. 

ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಹಿಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅರಬ್ಬಿ ಸಮುದ್ರದಲ್ಲಿನ ಗಾಳಿಯ ಅಸಮರ್ಪಕ ಚಲನೆಯಿಂದಾಗಿ ಛಳಿಯ ವಾತಾವರಣವು ಕಡಿಮೆಯಾಗಿ ಹಗುರ ಮೋಡದ ವಾತಾವರಣ ನಿರ್ಮಾಣವಾಗಿದೆ. ಈ ಪರಿಸ್ಥಿತಿಯು ಜನವರಿ 20ರ ತನಕ ಮುಂದುವರಿಯುವ ಸಾಧ್ಯತೆ ಇದೆ. 

14 January 2024

15.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಜನವರಿ 15ರಿಂದ ಹಿಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. 
ಇದೇ ಸಮಯದಲ್ಲಿ  ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮುಂದಿನ ಒಂದು ವಾರದ ಕಾಲ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಸ್ವಲ್ಪ ಮಟ್ಟಿಗೆ ಛಳಿಯೂ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಮಳೆಯ ಮುನ್ಸೂಚನೆ ಇರುವುದಿಲ್ಲ. 

10 January 2024

11.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಬಿಸಿಲು ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಜನವರಿ 11ರಿಂದ ಒಣ ಹವೆ ಆವರಿಸುವ ಲಕ್ಷಣಗಳಿವೆ. 
ಶ್ರೀಲಂಕಾದ ದಕ್ಷಿಣ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ. 


09 January 2024

10.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಶ್ರೀಲಂಕಾ ಸಮೀಪ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಕಡೆಯಿಂದ ಭೂಮಿ ಕಡೆಗೆ ಬೀಸುತ್ತಿರುವ ಗಾಳಿಯು ಕ್ಷೀಣಿಸಲಿದ್ದು, ಜನವರಿ 10ರಿಂದ ರಾಜ್ಯದಾದ್ಯಂತ ಮೋಡದ ಪ್ರಮಾಣವೂ ಕಡಿಮೆಯಾಗಿ ಒಣ ಹವೆ ಆವರಿಸುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ. 


08 January 2024

09.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಉತ್ತರ ಕನ್ನಡ ಮೋಡ ಮಾತ್ರ ಇರಬಹುದು. 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯಲ್ಲಿ ಶ್ರೀಲಂಕಾದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇದರಿಂದಾಗಿ ಜನವರಿ 10 ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ, ಮೋಡದ ವಾತಾವರಣವು ಕೊನೆಗೊಂಡು ಬಿಸಿಲಿನ ವಾತಾವರಣ ಇರುವ ಲಕ್ಷಣಗಳಿವೆ. 

07 January 2024

08.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ದಕ್ಷಿಣ ಕನ್ನಡ - ಕಾಸರಗೋಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ, ದಕ್ಷಿಣ ಕನ್ನಡ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಶಿೃಂಗೇರಿ, ತೀರ್ಥಹಳ್ಳಿ, ಕೊಪ್ಪ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಮಲೆನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಈಗಿನ ಮಳೆಯ ವಾತಾವರಣವು ಜನವರಿ 9ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. 

06 January 2024

07.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಶಿವಮೊಗ್ಗ ಈಗಾಗಲೇ ಮಳೆಯಾಗಿದೆ). 

ಮೈಸೂರು ಉತ್ತಮ, ಚಾಮರಾಜನಗರ, ಮಂಡ್ಯ, ತುಮಕೂರು ಉತ್ತರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ರಾಮನಗರ, ಬೆಂಗಳೂರು, ಹಾವೇರಿ, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. (ಧಾರವಾಡ ಈಗಾಗಲೇ ಮಳೆಯಾಗಿದೆ) 

ಈಗಿನ ಮಳೆಯ ವಾತಾವರಣವು ಜನವರಿ 9ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. 

05 January 2024

06.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಸುಳ್ಯ ಸುತ್ತಮುತ್ತ ಒಂದೆರಡು ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಮಳೆಯ ವಾತಾವರಣವು ಜನವರಿ 9ರ ತನಕ ಮುಂದುವರಿಯುವ ಸಾಧ್ಯತೆ ಇದೆ. 

04 January 2024

05. 01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ. ಕರಾವಳಿ ತೀರ ಭಾಗಗಳಲ್ಲಿ ಜಾಸ್ತಿಯೇ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಉತ್ತಮ ಹಾಗೂ ಶಿವಮೊಗ್ಗ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು ಉತ್ತರ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು (ಗ್ರಾಮಾಂತರ ಸಹಿತ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿನ ವಾಯು ನಿಮ್ನತೆ ಹಾಗೂ ಗಾಳಿಯ ಅಸಹಜ, ಅನಿಶ್ಚಿತ ದಿಕ್ಕಿನ ಚಲನೆಯ ಪರಿಣಾಮದಿಂದ ಜನವರಿ 9ರ ತನಕ ಈಗಿನ ಮಳೆಯ ವಾತಾವರಣವು ಮುಂದುವರಿಯುವ ಲಕ್ಷಣಗಳಿವೆ. 

03 January 2024

04.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡದ ಜೊತೆಗೆ ಗಾಳಿಯ ಅನಿಯಮಿತ ಚಲನೆಯ ಕಾರಣ ಈಗಿನ ಮುಂಗಾರು ಮಳೆಯ ರೀತಿಯ ವಾತಾವರಣ ಉಂಟಾಗಿದೆ. 
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನವರಿ 9ರ ತನಕ ಈ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 


02 January 2024

03.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡದ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಮೋಡ ಇರಬಹುದು. ಕುದುರೆಮುಖ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು (ಗ್ರಾಮಾಂತರ ಸಹಿತ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಧಾರವಾಡ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಕ್ಷೀಣಿಸುತ್ತಿದ್ದು, ಆತಂಕ ದೂರವಾಗಿದೆ. 
ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ದೂರವಾಗಿಲ್ಲ. 
ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಲಕ್ಷಣಗಳಿವೆ. ಇದರೊಂದಿಗೆ ಛಳಿಯ ವಾತಾವರಣವು ಸಮಾಪ್ತಿಗೊಳ್ಳುವ ಸಾಧ್ಯತೆಯೂ ಇದೆ. 

01 January 2024

02.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಉಳಿದ ಭಾಗಗಳಲ್ಲಿ ಬಿಸಿಲು ಇರಬಹುದು. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಈಗಿನಂತೆ ಮುನ್ಸೂಚನೆಯಂತೆ ಜನವರಿ 4 ಅಥವಾ 5 ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 
ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಪಥ ಬದಲಾಗುವ ಸಾಧ್ಯತೆಯೂ ಇದೆ 


07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...