Advertise

09 January 2024

10.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಶ್ರೀಲಂಕಾ ಸಮೀಪ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಕಡೆಯಿಂದ ಭೂಮಿ ಕಡೆಗೆ ಬೀಸುತ್ತಿರುವ ಗಾಳಿಯು ಕ್ಷೀಣಿಸಲಿದ್ದು, ಜನವರಿ 10ರಿಂದ ರಾಜ್ಯದಾದ್ಯಂತ ಮೋಡದ ಪ್ರಮಾಣವೂ ಕಡಿಮೆಯಾಗಿ ಒಣ ಹವೆ ಆವರಿಸುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ. 


No comments:

Post a Comment

16.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

16.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮ...