Advertise

18 January 2024

19.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ರಾತ್ರಿ ಅಥವಾ ಮುಂಜಾನೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಈ ವಾತಾವರಣವು ಜನವರಿ 24ರ ತನಕವೂ ಮುಂದುವರಿಯುವ ಲಕ್ಷಣಗಳಿವೆ. 
ಇದರಿಂದ ಛಳಿ ಕಡಿಮೆಯಾಗುವ ಸಾಧ್ಯತೆ ಹೆಚ್ಚಿದೆ. 


No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...