20 January 2024

21.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ಸಣ್ಣ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಛಳಿಯ ವಾತಾವರಣಕ್ಕೆ ಸ್ವಲ್ಪ ಮಟ್ಟಿಗೆ ತೊಡಕಾಗಿದೆ. 


No comments:

Post a Comment