25 January 2024

26.01.2024 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಲಿದ್ದು ತಡ ರಾತ್ರಿ ಅಥವಾ ಮುಂಜಾನೆ ಒಂದೆರಡು ಕಡೆ ಸಣ್ಣ ತುಂತುರು ಮಳೆಯ ಸಾಧ್ಯತೆಯೂ ಇದೆ. ನಾಳೆಯಿಂದ ಸ್ವಚ್ಛ ಆಕಾಶದ ಲಕ್ಷಣಗಳಿವೆ. 

ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ತಡ ರಾತ್ರಿ ಅಥವಾ ಮುಂಜಾನೆ ಒಂದೆರಡು ಕಡೆ ಸಣ್ಣ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

26 ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

No comments:

Post a Comment