Advertise

29 February 2024

01.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ 

ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇರುವುದಿಲ್ಲ. 

ಮಾರ್ಚ್ 1ರಿಂದ ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ 2 ದಿನಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದೆ. 

27 February 2024

28.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ತೀರ ಭಾಗದ ಒಂದೆರಡು ಕಡೆ ಒಂದೆರಡು ಹನಿ ಮಳೆಯ ಸಾಧ್ಯತೆಯೂ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ರಾಜ್ಯದಲ್ಲಿ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಉತ್ತರ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಅಲ್ಲಲ್ಲಿ ಮಳೆಯ ಆರಂಭವಾಗುವ ಮುನ್ಸೂಚನೆ ಇದ್ದು. ಜಮ್ಮು ಕಾಶ್ಮೀರದಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 

25 February 2024

26.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಯಾದಗಿರಿ, ಗದಗ, ಕಲಬುರ್ಗಿ, ವಿಜಯಪುರ ಬೀದರ್ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ.

ಫೆಬ್ರುವರಿ 27ರಿಂದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು ಉತ್ತರ ಒಳನಾಡು ಭಾಗಗಳಲ್ಲಿ ಇನ್ನೂ 2 ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...