01 February 2024

02.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ದಕ್ಷಿಣ ಒಳನಾಡು ಭಾಗಗಳಲ್ಲಿ ಫೆಬ್ರುವರಿ 1 ಹಾಗೂ 2ರಂದು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಫೆಬ್ರುವರಿ 3ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 


No comments:

Post a Comment