Advertise

10 February 2024

11.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಮಂಗಳೂರು ತೀರ ಭಾಗಗಳಲ್ಲಿ ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ. ಉಳಿದ ಕರಾವಳಿ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಒಣ ಹವೆ ಮುಂದುವರಿಯಲಿದೆ. 

ಬೀದರ್, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಲಬುರ್ಗಿ - ಮಹಾರಾಷ್ಟ್ರ ಗಡಿ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೂ ಒಣ ಹವೆ ಮುಂದುವರಿಯಲಿದೆ. 

ತೆಲಂಗಾಣದ ಕರೀಂನಗರ, ಮಹಾರಾಷ್ಟ್ರದ ಚಂದ್ರಪುರ, ನಾಗಪುರ ಹಾಗೂ ಅಮರಾವತಿ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...