18.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಧ್ಯಕ್ಕೆ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಇರುವುದಿಲ್ಲ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ಫೆಬ್ರುವರಿ 25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಆರಂಭವಾಗುವ ಲಕ್ಷಣಗಳಿದ್ದು, ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಆದರೂ ಫೆಬ್ರುವರಿ 22ರ ನಂತರ ಸರಿಯಾದ ಮಾಹಿತಿ ಸಿಗಬಹುದು.
ಫೆಬ್ರುವರಿ 17ರಿಂದ ಉತ್ತರ ಭಾರತದ ಜಮ್ಮು ಕಾಶ್ಮೀರದಿಂದ ಆರಂಭವಾಗಿ ಹಿಮಾಚಲ ಪ್ರದೇಶ, ದೆಹಲಿ, ಪಂಜಾಬ್, ಹರಿಯಾಣ, ಉತ್ತರಾಖಂಡ, ನೇಪಾಳ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಹಾಗೂ ಉತ್ತರ - ಈಶಾನ್ಯ ರಾಜ್ಯಗಳ ತನಕವೂ ಅಲ್ಲಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆ ಇದೆ.
No comments:
Post a Comment