20 February 2024

21.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಮೈಸೂರು, ಚಾಮರಾಜನಗರ ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಹಾಗೂ ಮೈಸೂರಿನ ಒಂದೆರಡು ಕಡೆ ಒಂದೆರಡು ಹನಿ ಮಳೆಯ ಸಾಧ್ಯತೆಯೂ ಇದೆ. 

 ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಫೆಬ್ರುವರಿ 25ಕ್ಕೆ ದಕ್ಷಿಣ ಒಳನಾಡು ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 24ರಂದು ಸರಿಯಾದ ಮಾಹಿತಿ ಸಿಗಬಹುದು. 

No comments:

Post a Comment