Advertise

25 February 2024

26.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಯಾದಗಿರಿ, ಗದಗ, ಕಲಬುರ್ಗಿ, ವಿಜಯಪುರ ಬೀದರ್ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ.

ಫೆಬ್ರುವರಿ 27ರಿಂದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು ಉತ್ತರ ಒಳನಾಡು ಭಾಗಗಳಲ್ಲಿ ಇನ್ನೂ 2 ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...