Advertise

27 February 2024

28.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ತೀರ ಭಾಗದ ಒಂದೆರಡು ಕಡೆ ಒಂದೆರಡು ಹನಿ ಮಳೆಯ ಸಾಧ್ಯತೆಯೂ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ರಾಜ್ಯದಲ್ಲಿ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಉತ್ತರ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಅಲ್ಲಲ್ಲಿ ಮಳೆಯ ಆರಂಭವಾಗುವ ಮುನ್ಸೂಚನೆ ಇದ್ದು. ಜಮ್ಮು ಕಾಶ್ಮೀರದಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 

No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...