Advertise

30 March 2024

31.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

31.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಮಂಗಳೂರು ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಹಾಸನದ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಧಿಕ ತಾಪಮಾನದ ಕಾರಣದಿಂದ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಈಗಿನಂತೆ ಎಪ್ರಿಲ್ 6ರಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. 

28 March 2024

29.03.2024 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾರ್ಕಳ, ಮೂಡಬಿದರೆ, ಪಡುಬಿದ್ರಿ, ಸುರತ್ಕಲ್, ಮಂಗಳೂರು, ಕಾಸರಗೋಡು ಸುತ್ತಮುತ್ತ ಪ್ರದೇಶದಲ್ಲಿ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ. 

ಬೆಳಗಾವಿಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದ್ದು, ಧಾರವಾಡ ಮೋಡದ ವಾತಾವರಣದ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮಾರ್ಚ್ 31ರಿಂದ ಎಪ್ರಿಲ್ 4ರ ಮಧ್ಯೆ ಕೊಡಗಿನ ಒಂದೆರಡು ಕಡೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 



27 March 2024

28.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತದ ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು ಸಂಜೆ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆಯ ವೇಳೆಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಗುಡುಗು ಸಹಿತ ಒಂದು ಅಥವಾ ಎರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

26 March 2024

27.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ನಿರೀಕ್ಷೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. 


25 March 2024

26.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಾರ್ಚ್ಸ 26ರಿಂದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಸೀಮಿತ ಪ್ರದೇಶಗಳಲ್ಲಿ ಇರಬಹುದು. ದೊಡ್ಡ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. 
(ಬೇಸಿಗೆ ಮಳೆಯ ಮುನ್ಸೂಚನೆ ತೀವ್ರ ವೇಗದಲ್ಲಿ ಬದಲಾಗುತ್ತಿರುತ್ತದೆ.) 


24 March 2024

25.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ. 

ಈಗಿನಂತೆ ಕರಾವಳಿಯಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣ ಮುಂದುವರಿಯಲಿದ್ದು, 
ಮಾರ್ಚ್ 27ರಿಂದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಜೊತೆಗೆ ಕರಾವಳಿ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 
ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. 

23 March 2024

24.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಜೊತೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ರಾಜ್ಯದಲ್ಲಿ ಮಳೆ ಕಡಿಯಾಗಲಿದ್ದು, ಮಾರ್ಚ್ 28ರಿಂದ ಮತ್ತೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. 
ಮಾರ್ಚ್ 31 ಅಥವಾ ಎಪ್ರಿಲ್ 1ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 

22 March 2024

23.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದು ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮಾರ್ಚ್ 23ರಿಂದ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಮಾರ್ಚ್ 28ರಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ. 
ಆದರೆ ಒಳನಾಡು ಭಾಗಗಳಲ್ಲಿ ಸಧ್ಯಕ್ಕೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ 


21 March 2024

22.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಹೊರನಾಡು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ರಾಜ್ಯದ ದಕ್ಷಿಣ ಕರಾವಳಿ (ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು) ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೂ ಒಂದು ವಾರದ ಕಾಲ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ. 

20 March 2024

21.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಹಾಗೂ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನಂತೆ ಮಾರ್ಚ್ 21ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 23ರ ನಂತರ ಮಳೆ ಕಡಿಮೆಯಾದರೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮತ್ತೆರಡು ದಿನ ಮಳೆ ಮುಂದುವರಿಯುವ ಲಕ್ಷಣಗಳಿವೆ. 


19 March 2024

20.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಇವತ್ತು ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಇಲ್ಲ. ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಬಹುದು. 

ಈಗಿನಂತೆ ಮಾರ್ಚ್ 21ರಿಂದ 3 ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 24ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. 
ಈ ಸಲ ರಾಜ್ಯದಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯ ಆರಂಭವಾಗುವ ಲಕ್ಷಣಗಳಿವೆ. 

18 March 2024

19.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಇರಬಹುದು. 

ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮಾರ್ಚ್ 21ರಿಂದ 23ರ ತನಕ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

18.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಮಾರ್ಚ್ 21ರಂದು ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, 22 ಹಾಗೂ 23ರಂದು ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನ ಪ್ರಕಾರ ಮಾರ್ಚ್ 24ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. 

16 March 2024

17.03.2024 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಬಳ್ಳಾರಿಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮುನ್ಸೂಚನೆಯಂತೆ ಮಾರ್ಚ್ 21ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 22ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 

14 March 2024

15.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ರಾಮನಗರ ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮಾರ್ಚ್ 16ರಿಂದ 19ರ ತನಕ ಮಧ್ಯಪ್ರದೇಶ, ಛತ್ತೀಸಗಡ, ಒಡಿಶಾ, ಉತ್ತರ ಆಂದ್ರಾ, ತೆಲಂಗಾಣ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಮಾರ್ಚ್ 20ರಿಂದ ತಮಿಳುನಾಡು, ಕೇರಳ ಭಾಗದಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮಾರ್ಚ್ 22ರಿಂದ ಕರ್ನಾಟಕದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

13 March 2024

14.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಕಾಸರಗೋಡು, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ತುಮಕೂರಿನ ಗುಬ್ಬಿ, ಶಿರಾ, ಚಿಕ್ಕನಾಯಕನಹಳ್ಳಿ, ಹುಳಿಯಾರು ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮಾರ್ಚ್ 16ರಿಂದ ಮಧ್ಯಪ್ರದೇಶ, ಛತ್ತೀಸಗಡ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಮಾರ್ಚ್ 22ರಿಂದ ತಮಿಳುನಾಡುಹಾಗೂ ಕೇರಳದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಇದರೊಂದಿಗೆ ರಾಜ್ಯದ ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 

12 March 2024

13.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈ ಮೋಡದ ಕಾರಣದಿಂದ ವಾತಾವರಣದಲ್ಲಿ ತೇವಾಂಶ ಹಾಗೂ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ. 

ಮಾರ್ಚ್ 13 ಸಂಜೆಯಿಂದ 14ರ ಬೆಳಿಗ್ಗೆ ತನಕ ಕೊಡಗು ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು, ಮೈಸೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 


11 March 2024

12.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಈಗಿನ ಪ್ರಕಾರ ಮಾರ್ಚ್ 13 ಹಾಗೂ 14ರಂದು ಕೊಡಗು ಜಿಲ್ಲೆಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ. 

10 March 2024

11.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಒಂದೆರಡು ಕಡೆ ಹಗುರ ಮೋಡದ ಸಾಧ್ಯತೆಯೂ ಇದೆ. 

ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮಾರ್ಚ್ 13 ಹಾಗೂ 14ರಂದು ಕೊಡಗಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

02 March 2024

03.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಸಹ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಅಲ್ಲಲ್ಲಿ ಸಣ್ಣ ಪ್ರಮಾಣದ ಹಗುರ ಮೋಡದ ವಾತಾವರಣದ ಸಾಧ್ಯತೆ ಇದೆ. 

ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಾಣುತ್ತಿಲ್ಲ. 
ಜಮ್ಮು ಸುತ್ತಮುತ್ತ ಪ್ರದೇಶಗಳಲ್ಲಿ ಓರೆಂಜ್ ಅಲರ್ಟ್ ಕಾಣಿಸುತ್ತಿದೆ.
ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

01 March 2024

02.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಇವತ್ತಿನಿಂದ ಉತ್ತರ ಭಾರತದ ಉತ್ತರ, ಮಧ್ಯ ಹಾಗೂ ವಾಯವ್ಯ ಭಾಗಗಳಲ್ಲಿ ಮಳೆ ಆರೋಭವಾಗುವ ಮುನ್ಸೂಚನೆ ಇದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...