10 March 2024

11.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಒಂದೆರಡು ಕಡೆ ಹಗುರ ಮೋಡದ ಸಾಧ್ಯತೆಯೂ ಇದೆ. 

ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮಾರ್ಚ್ 13 ಹಾಗೂ 14ರಂದು ಕೊಡಗಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

No comments:

Post a Comment