Advertise

12 March 2024

13.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈ ಮೋಡದ ಕಾರಣದಿಂದ ವಾತಾವರಣದಲ್ಲಿ ತೇವಾಂಶ ಹಾಗೂ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ. 

ಮಾರ್ಚ್ 13 ಸಂಜೆಯಿಂದ 14ರ ಬೆಳಿಗ್ಗೆ ತನಕ ಕೊಡಗು ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು, ಮೈಸೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 


No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...