Advertise

14 March 2024

15.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ರಾಮನಗರ ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮಾರ್ಚ್ 16ರಿಂದ 19ರ ತನಕ ಮಧ್ಯಪ್ರದೇಶ, ಛತ್ತೀಸಗಡ, ಒಡಿಶಾ, ಉತ್ತರ ಆಂದ್ರಾ, ತೆಲಂಗಾಣ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಮಾರ್ಚ್ 20ರಿಂದ ತಮಿಳುನಾಡು, ಕೇರಳ ಭಾಗದಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮಾರ್ಚ್ 22ರಿಂದ ಕರ್ನಾಟಕದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

No comments:

Post a Comment

29.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು - ಕರ್ನಾಟಕದ ಗಡಿ ಭಾಗಗಳ ಸುತ...