Advertise

30 April 2024

01.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮೇ 6ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

29 April 2024

30.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಧಿಕ ಉಷ್ಣತೆಯೊಂದಿಗೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. 

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಮೇ 6ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ. 

28 April 2024

29.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನಂತೆ ರಾಜ್ಯದ ಮುಂದಿನ 3 ದಿವಸಗಳ ಕಾಲ ಉಷ್ಣ ಗಾಳಿ ಹೆಚ್ಚಿರುವ ಲಕ್ಷಣಗಳಿದ್ದು, ಅದರಲ್ಲೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. 
ಮೇ 6ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ. 


27 April 2024

28.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು ಸಂಜೆ, ರಾತ್ರಿ ಮೋಡ ಸ್ವಲ್ಪ ಜಾಸ್ತಿ ಇದ್ಧರೂ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ. 

ರಾಜ್ಯದ ಉಳಿದ ಭಾಗಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ. 

ಈಗಿನಂತೆ  ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಸಮುದ್ರದ ಭಾಗದಿಂದ ( ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ) ಭೂಮಿಯ ಕಡೆಗೆ ಬೀಸುವ ಗಾಳಿಯ ಒತ್ತಡ ತುಂಬಾ ಕಡಿಮೆ ಇರುವುದರಿಂದ ವಾತಾವರಣದಲ್ಲಿ ಬಿಸಿ ಗಾಳಿಯ ಪ್ರಭಾವ ಮುಂದಿನ 4 ದಿನಗಳ ಕಾಲ ಹೆಚ್ಚಿರುವ ಸಾಧ್ಯತೆ ಇದೆ. 


26 April 2024

27.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ಎಪ್ರಿಲ್ 28 ರಿಂದ ಮೂರು ದಿನಗಳ ಕಾಲ ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


25 April 2024

26.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಒಣ ಹವೆ ಆವರಿಸುವ ಮುನ್ಸೂಚನೆ ಇದೆ. 

ಕೊಡಗು ಹಾಗೂ ಚಿಕ್ಕಮಗಳೂರಲ್ಲಿ  ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮೇ 1ರಿಂದ ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 
ಕರಾವಳಿ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ ಸಧ್ಯಕ್ಕೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 


23 April 2024

24.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಹಾಗೂ ಶಿವಮೊಗ್ಗ - ಉತ್ತರ ಕನ್ನಡ ಗಡಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ( ಆದರೆ ಈಗಿನ ಪರಿಸ್ಥಿತಿ ಗಮನಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ) 

ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಉಳಿದ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು ಒಂದೆರಡು ಕಡೆ, ಚಿತ್ರದುರ್ಗ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. 

ಈಗಿನಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು, ಮುಂದಿನ 10 ದಿನಗಳವರೆಗೂ ದೊಡ್ಡ ಪ್ರಮಾಣದ ಹಾಗೂ ಅಧಿಕ ವ್ಯಾಪ್ತಿಯ ಮಳೆ ಕಾಣಿಸುತ್ತಿಲ್ಲ 

22 April 2024

23.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಕೊಡಗು ಹಾಗೂ ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಕೊಪ್ಪ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ  ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮುಂದಿನ 10 ದಿನಗಳವರೆಗೆ ರಾಜ್ಯದಲ್ಲಿ ಅಧಿಕ ಉಷ್ಣತೆಯಿಂದಾಗಿ ಒಂದೆರಡು ಕಡೆ, ಸೀಮಿತ ಪರಿಧಿಯಲ್ಲಿ ಅನಿರೀಕ್ಷಿತ ಮಳೆ ಹೊರತುಪಡಿಸಿ ತೀವ್ರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 


21 April 2024

22.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಹಾಗೂ ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬೆಳಗಾವಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಮಂಡ್ಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಾಗಲೇ ಮಳೆಯ ತೀವ್ರತೆ ಕಡಿಯಾಗಲಿದ್ದು, ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಅಂತಹ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ. 
ತೀವ್ರ ಉಷ್ಣಾಂಶ ಏರಿಕೆಯಿಂದಾಗಿ ಪರಿಸ್ಥಿತಿ ಬದಲಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 


20 April 2024

21.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಈಗಾಗಲೆ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು ಭಾಗಗಳ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 
ದಾವಣಗೆರೆಯ ಹಲವು ಭಾಗಗಳಲ್ಲಿ, ಚಿತ್ರದುರ್ಗ ಒಂದೆರಡು ಕಡೆ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಎಪ್ರಿಲ್ 21ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ  ಮಾತ್ರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಮತ್ತೆ ಮುಂದಿನ 2 ಅಥವಾ 3 ದಿನಗಳಲ್ಲಿ ಅದೂ ಕಡಿಮೆಯಾಗವ ಲಕ್ಷಣಗಳಿವೆ. 

19 April 2024

20.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಗುಡುಗು ಸಹಿತ ಕಡೆ ಭಾರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಧಾರವಾಡ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಎಪ್ರಿಲ್ 20ರಿಂದ ಮಳೆ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾತ್ರ ಮತ್ತೂ ಎರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


18 April 2024

19.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಚಾಮರಾಜನಗರ, ಬಾಗಲಕೋಟೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಈಗಿನಂತೆ ಎಪ್ರಿಲ್ 20ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಮುಂದಿನ ದಿನಗಳಲ್ಲಿ ಬದಲಾಗುವ ಸಾಧ್ಯತೆ ಹೆಚ್ಚಿದೆ. 
ಕರಾವಳಿ ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಎಪ್ರಿಲ್ 18, 19ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಆಮೇಲೆ ಮಳೆ ಕ್ಷೀಣಿಸುವ ಲಕ್ಷಣಗಳಿವೆ. 



17 April 2024

18.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕೊಡಗು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಬೆಂಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಆದರೆ ಇವತ್ತು ಈಗಾಗಲೇ ಮುಂಜಾನೆಯಿಂದ ರಾಜ್ಯದ ಅಲ್ಲಲ್ಲಿ ಬಿಳಿ ಮೋಡದ ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕಡಿಮೆಯಾಗಬಹುದು. 

ಈಗಿನಂತೆ ಎಪ್ರಿಲ್ 18ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. 

15 April 2024

16.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನಂತೆ ಪಶ್ಚಿಮದ ಗಾಳಿ ಹಾಗೂ ಪೂರ್ವದ ಗಾಳಿಯು ಸಂಧಿಸಲಿರುವ ಪ್ರದೇಶವು ಕರಾವಳಿ ಕಡೆಗೆ ಚಲಿಸಿದ್ದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 
ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. 



14 April 2024

15.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ 


ಇವತ್ತು ಹಾಗೂ ನಾಳೆ  ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಪ್ರಿಲ್ 16ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆಮೇಲಿನ ದಿನಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಜಾಸ್ತಿಯಾಗುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿ ಎಪ್ರಿಲ್ 20ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


13 April 2024

14.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ, ಧರ್ಮಸ್ಥಳ, ಚಾರ್ಮಾಡಿ, ಕಾರ್ಕಳ ಸುತ್ತಮುತ್ತ ಸ್ವಲ್ಪ ಜಾಸ್ತಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ, ಸಕಲೇಶಪುರ ಸುತ್ತಮುತ್ತ ಸಾಮಾನ್ಯ, ಚಿಕ್ಕಮಗಳೂರು, ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಅಲ್ಲಲ್ಲಿ ಉತ್ತಮ, ಬಾಗಲಕೋಟೆ, ವಿಜಾಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ,, ದಾವಣಗೆರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೆಲವು ಭಾಗಗಳಲ್ಲಿ ಗಾಳಿಯ ಒತ್ತಡದಿಂದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಈಗಿನಂತೆ  ಎಪ್ರಿಲ್ 14 ರಿಂದ ರಾಜ್ಯದಲ್ಲಿ ಮಳೆ ಕಡಿಯಾಗಲಿದ್ದು ಎಪ್ರಿಲ್ 18ರಿಂದ ಮಲೆನಾಡು ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿ (ದಕ್ಷಿಣ ಕನ್ನಡ ಹಾಗೂ ಉಡುಪಿ) ಎಪ್ರಿಲ್ 20ರಿಂದ ಹೆಚ್ಚು ವ್ಯಾಪ್ತಿಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 


12 April 2024

13.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ (ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಜಾಸ್ತಿ ಇರಬಹುದು) ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನದ ಸಕಲೇಶಪುರ,  ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

(ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ, ಕೆಲವು ಭಾಗಗಳಲ್ಲಿ ತುಂತುರು ಮಳೆ ಇರಬಹುದು) 

ಈಗಿನಂತೆ ಕರಾವಳಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ. ಆಮೇಲೆ ಕಡಿಮೆಯಾದರೂ  ಎಪ್ರಿಲ್ 18ರಿಂದ ಮತ್ತೆ ಉತ್ತಮ ಮಳೆಯ ಮುನ್ಸೂಚನೆ ಇದೆ. 

11 April 2024

12.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ವಾತಾವರಣದ ತೇವಾಂಶ ಕಡಿಮೆಯಾಗಿರುವುದರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 


ಕೊಡಗು, ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಅಲ್ಲಲ್ಲಿ ಮೋಡ ಅಥವಾ ತುಂತುರು ತುಂತುರು ಮಳೆಯ ಮುನ್ಸೂಚನೆ ಇದೆ. 

ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮೇಲಿನ ನಕ್ಷೆಯಲ್ಲಿ ಗುರುತಿಸಿದ ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. ಸಂಜೆಯ ವೇಳೆಗೆ ಪೂರ್ವ ಹಾಗೂ ಪಶ್ಚಿಮದ ಗಾಳಿಯೂ ಸಂಧಿಸುವ ಕಾರಣದಿಂದ ಒತ್ತಡ ಹೆಚ್ಚಾಗಿ ಮಳೆಯ ವಾತಾವರಣ ಸೃಷ್ಟಿಯಾಗಿದೆ. ಈ ಪ್ರಕ್ರಿಯೆಯೂ ಎಪ್ರಿಲ್ 14ರ ನಂತರ ಕಡಿಮೆಯಾಗಲಿದ್ದು, ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಮೊದಲು ಎ. 12 ಹಾಗೂ 13ರಂದು ಕೊಡಗು, ಹಾಸನ, ಚಿಕ್ಕಮಗಳೂರಿನ  ಅಲ್ಲಲ್ಲಿ, ದಕ್ಷಿಣ ಕನ್ನಡ, ಕಾಸರಗೋಡು ಭಾಗಗಳಲ್ಲಿ ಒಂದೆರಡು ಕಡೆ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 



10 April 2024

11.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ವಾತಾವರಣದೊಂದಿಗೆ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೇಲೆ ನಕ್ಷೆಯಲ್ಲಿ ಗುರುತಿಸಿದ ಭಾಗಗಳ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. (ಸಂಜೆಯ ವೇಳೆಗೆ ಈ ಪ್ರದೇಶಗಳಲ್ಲಿ ಪೂರ್ವದ ಹಾಗೂ ಪಶ್ಚಿಮದ ಗಾಳಿ ಸಂಧಿಸುವ ಪ್ರದೇಶಗಳು). ದಾವಣಗೆರೆ ಒಂದೆರಡು ಕಡೆ ಚಿಕ್ಕ ವ್ಯಾಪ್ತಿಯಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಸ್ವಲ್ಪ ಜಾಸ್ತಿಯೇ ಇರಬಹುದು. ಈಗಿನಂತೆ ಎಪ್ರಿಲ್ 11ರಿಂದ ಮುಂದಿನ 2 ಅಥವಾ 3 ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ 

ಈಗಿನ ಮುನ್ಸೂಚನೆಯಂತೆ ಎಪ್ರಿಲ್ 12ರಿಂದ ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 


09 April 2024

10.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 

ಕೊಡಗು, ಹಾಸನ, ಶಿವಮೊಗ್ಗ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಇರಲಿದ್ದು, ಚಿಕ್ಕಮಗಳೂರು ಜಿಲ್ಲೆಯ ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರಿನಲ್ಲಿ ಉಂಟಾದ ಮೋಡಗಳು ಪೂರ್ವಕ್ಕೆ ಸಂಚರಿಸುವ ಸಾಧ್ಯತೆ ಇದ್ದು, ದಾವಣಗೆರೆಯ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಈಗಿನಂತೆ ಎಪ್ರಿಲ್ 12ರ ಮಳೆಯ ಸಾಧ್ಯತೆಯೂ ಕ್ಷೀಣಿಸುತ್ತಿದ್ದು, ಎಪ್ರಿಲ್ 17ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಲಕ್ಷಣಗಳಿವೆ. ಬೇಸಿಗೆ ಮಳೆಯ ವಾತಾವರಣವು ಕ್ಷಣ  ಕ್ಷಣಕ್ಕೂ ಬದಲಾಗುತ್ತಿರುವುದನ್ನು ಗಮನಿಸಬೇಕಾಗಿದೆ. 

08 April 2024

09.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಕೊಡಗು, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ವಾತಾವರಣ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ 

ಈಗಿನಂತೆ ಘಟ್ಟದ ಪ್ರದೇಶಗಳಲ್ಲಿ ಉಂಟಾಗುವ ಮೋಡಗಳು ಪೂರ್ವಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ ಎಪ್ರಿಲ್ 14, 15ರ ನಂತರ ಅಂದರೆ ವಿಷು ಹಬ್ಬದ ನಂತರ ಮಳೆಯ ಸಾಧ್ಯತೆ ಇದೆ. 
ರಾಜ್ಯದ ಉಳಿದ ಭಾಗಗಳಲ್ಲಿ ಎಪ್ರಿಲ್ 13, 14ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...