30 April 2024

01.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮೇ 6ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

No comments:

Post a Comment