03.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಕೊಡಗು ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 7ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಆರಂಭದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು ಮತ್ತೆರಡು ದಿನಗಳಲ್ಲಿ ರಾಜ್ಯದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.
No comments:
Post a Comment